ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ 3ರಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅವರು ಜಂಟಿ ಸದನವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಸಿಎಂ ಹೇಳಿದರು.
ಬಜೆಟ್‌ನಲ್ಲಿ ಜನರಿಗೆ ಬೆಲೆ ಏರಿಕೆ ಶಾಕ್ ನಿಂದ ಮುಕ್ತಿ ಸಿಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆಲೆ ಏರಿಕೆಯನ್ನು ಕೇಂದ್ರ-ರಾಜ್ಯ ಸರ್ಕಾರ ಮಾಡಬೇಕು. ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ಒತ್ತು ಕೊಡುತ್ತದೆ. ರಾಜ್ಯ ಸರ್ಕಾರ ಎನ್ ಮಾಡಬೇಕೋ ಅದನ್ನು ಮಾಡುತ್ತದೆಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದರು.
ಬಜೆಟ್ ಮಂಡಿಸಿದ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಸದನದ ಕೊನೆಯಲ್ಲಿ ಉತ್ತರ ಕೊಡಲಾಗುವುದು. ಅಧಿವೇಶನ ಎಷ್ಟು ದಿನ ನಡೆಯಬೇಕೆಂದು ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.
- ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

- ಏ.1ರಿಂದ ನೀರಿನ ದರ ಏರಿಕೆ

- ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ

- ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

- LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

- ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ




