ಬೆಳಗಾವಿ: ಒಂದು ಎಕರೆ ಕಬ್ಬಿನ ಗದ್ದೆಯನ್ನು ಗಾಂಜಾ ಬೆಳೆಸಲು ಬಳಸಿದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ದಾಳಿ ನಡೆಸಿ, ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಸಿಂಗಾಡಿ ಮಾಳಪ್ಪ ಹಿರೇಕೋಡಿ (45) ತನ್ನ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದಾನೆಂದು ಪೊಲೀಸರು ಪತ್ತೆಹಚ್ಚಿದ್ದಾರೆ.
ಬೆಳಗಾವಿ ಹಾಗೂ ರಾಯಬಾಗ ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಮಾರುಕಟ್ಟೆ ಮೌಲ್ಯ ಸುಮಾರು ₹22 ಲಕ್ಷ ಇರುವ 441 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.ಇದನ್ನು ಓದಿ –ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಆರೋಪಿ ಮಾಳಪ್ಪನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.








