By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಸಚಿವ ಡಿ. ಸುಧಾಕರ್ ನಿಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Chitradurga > ಸಚಿವ ಡಿ. ಸುಧಾಕರ್ ನಿಧನ
ChitradurgaKarnataka

ಸಚಿವ ಡಿ. ಸುಧಾಕರ್ ನಿಧನ

Team Varthaman
Last updated: May 10, 2026 9:46 AM
Team Varthaman
Published: May 10, 2026
Share
SHARE
  • ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟ

ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅನಾರೋಗ್ಯ ಹಿನ್ನೆಲೆ:
ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ನಂತರ ಅವರನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ನಿಧನರಾದರು.

Join WhatsApp Group

ಸಿಎಂ ಸಂತಾಪ:
ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ ನಾಯಕರು. ವೈದ್ಯರ ಪ್ರಯತ್ನಗಳ ನಡುವೆಯೂ ಅವರು ನಮ್ಮನ್ನು ಅಗಲಿರುವುದು ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ” ಎಂದು ತಿಳಿಸಿದ್ದಾರೆ.

ಕೌಟುಂಬಿಕ ಹಾಗೂ ರಾಜಕೀಯ ಪಯಣ:
1961 ಮಾರ್ಚ್ 28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಗಳ ಪುತ್ರನಾಗಿ ಜನಿಸಿದ ಸುಧಾಕರ್, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿದ್ದರು. ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಅವರು ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಹಂತ ಹಂತವಾಗಿ ಬೆಳೆದು ಜಿಲ್ಲೆಯ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದರು.

ವೈಯಕ್ತಿಕವಾಗಿ ಸರಳ ಸ್ವಭಾವದವರಾಗಿದ್ದ ಅವರು ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಅವರ ನಿಧನದಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ವಾತಾವರಣ ನಿರ್ಮಾಣವಾಗಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
ಹಾಸನಾಂಬ ಜಾತ್ರೋತ್ಸವ ಸಂಪನ್ನ: ದಾಖಲೆ ಭಕ್ತರ ನೆರೆ ದರ್ಶನ
13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
ಗ್ರಾಮೀಣ ಯೋಜನಾ ಇಲಾಖೆ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ
ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ
ಮೆಟ್ರೋ ಹಳದಿ ಮಾರ್ಗ : ಡಿ. 22ರಿಂದ 12 ನಿಮಿಷಕ್ಕೊಂದು ರೈಲು?
TAGGED:D. Sudhakarlatestnewsಡಿ. ಸುಧಾಕರ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
PoliticsTrending

ಎನ್‌ಡಿಎ 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ

Team Varthaman
Team Varthaman
November 14, 2025
ಮೂರನೇ ಆಷಾಢ ಶುಕ್ರವಾರ: ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ತಾಯಿ
RCBಗೆ ರೋಚಕ ಜಯ, 18 ವರ್ಷಗಳ ವನವಾಸಕ್ಕೆ ಅಂತ್ಯ : ಮೊದಲ ಟ್ರೋಫಿ ಎತ್ತಿಹಿಡಿದ ವಿರಾಟ್
ಆಪರೇಷನ್ ಅರಹಮಾ: ಗಂಡೇಬಲ್‌ನಲ್ಲಿ ಉಗ್ರ ಹತ್ಯೆ
ಕನ್ನಡವನ್ನು ನಾವೆಷ್ಟು ಪ್ರೀತಿಸುತ್ತೇವೆ…… ?
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?