ಮಂಡ್ಯ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರ ಶವ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬಳಿ ಕಂಡುಬಂದಿದೆ.
ಡಾ.ಸುಬ್ಬಣ್ಣ ಅವರ ಮೃತದೇಹ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೈಸೂರು ನಗರದಲ್ಲಿರುವ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದ ಇವರು ಮೇ 7ರಿಂದ ನಾಪತ್ತೆಯಾಗಿದ್ದರು.
ಚಿರಪರಿಚಿತ ಕೃಷಿ ವಿಜ್ಞಾನಿಯಾಗಿದ್ದ ಅವರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು. ಇದೀಗ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ .ಇದನ್ನು ಓದಿ -CUET UG 2025 ಪ್ರವೇಶ ಪತ್ರ ಬಿಡುಗಡೆ
ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ . ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.