ಬೆಂಗಳೂರು: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಗ್ಯದಲ್ಲಿ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಅಗತ್ಯ ಚಿಕಿತ್ಸೆಯನ್ನು ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ನಿರಂತರ ನಿಗಾ ವಹಿಸಲಾಗಿದೆ.
ಇಕ್ಬಾಲ್ ಹುಸೇನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ.








