By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
KarnatakaMysorePolitics

ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ

Team Varthaman
Last updated: April 20, 2026 7:09 PM
Team Varthaman
Published: April 20, 2026
Share
SHARE

ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.


ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ  ಮಾಧ್ಯಮದವರ ಜೊತೆ ಮಾತನಾಡಿದರು. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ  73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು.

Join WhatsApp Group

ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.


ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಪ್ರಧಾನಿಗಳ ನಡುವೆ ಆದ ಮಾತುಕತೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಧಾನಿಗಳು ಕೇಳಿದ್ದರು. ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು. ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.


ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು,  ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.


ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ  ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು  ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲವೆಂದರು. ಇಡಿ ದಾಳಿ ಬಗ್ಗೆ ತಿಳಿದಿಲ್ಲ: ಶಾಸಕ ಎನ್.ಎ.ಹ್ಯಾರೀಸ್ ಅವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು.


ಕೇರಳದಲ್ಲಿ ಕಾಂಗ್ರೆಸ್ ಗೆಲ್ಲಲಿದೆ
ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಮಿತ್ರ ಪಕ್ಷಗಳು  ಗೆಲ್ಲಲಿದ್ದು ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 

  • ಉಡುಗೊರೆ ಹೊರೆಯಾಗದಿರಲಿ
    by Team Varthaman
  • ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    by Team Varthaman
  • ಇಂಧನ ದರ ಏರಿಕೆ: ಖಾಸಗಿ ಬಸ್‌ ಪ್ರಯಾಣ ದರ ಹೆಚ್ಚಳ
    by Team Varthaman
  • ಪೆಟ್ರೋಲ್‌, ಡೀಸೆಲ್ ದರ ಏರಿಕೆ ಹಿಂಪಡೆಯಲಿ: ಸಿದ್ದರಾಮಯ್ಯ
    by Team Varthaman
  • ದರ್ಶನ್‌ಗೆ ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿಲ್ಲ
    by Team Varthaman
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರು ದುರ್ಮರಣ
ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
ಅತ್ಯಾಚಾರ ಆರೋಪಿಗಳಿಗೆ ೨೦ ವರ್ಷ ಕಠಿಣ ಶಿಕ್ಷೆ
4ನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ಸಿಂಹವಾಹಿನಿ ಅಲಂಕಾರ
ಡಿಕೆಶಿ ದೆಹಲಿಗೆ ಪ್ರಯಾಣ: ಅಧಿಕಾರ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ
TAGGED:latestnewsMysore NewsNarendra ModiPoliticsSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaTrending

BMTC ಬಸ್ ಅಪಘಾತ: ಇಬ್ಬರು ದುರ್ಮರಣ, ಚಾಲಕ-ನಿರ್ವಾಹಕ ಪರಾರಿ

Team Varthaman
Team Varthaman
March 27, 2025
SSCಯಿಂದ 2,423 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ
ಏ.೧೮ಕ್ಕೆ ಮೌನ ಪ್ರತಿಭಟನೆಗೆ ಪರಿಸರ ಬಳಗ ನಿರ್ಧಾರ
“ರೈಟ್ ಟು ಡ್ರೈ”
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?