ನವದೆಹಲಿ: ಸಾರ್ವಜನಿಕ ಆರೋಗ್ಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 28ರಂದು ಅಜ್ಮೀರ್‌ನಲ್ಲಿ ದೇಶಾದ್ಯಂತ ಉಚಿತ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಭಾರತದಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ, 14 ವರ್ಷದ ಬಾಲಕಿಯರನ್ನು ಈ ರೋಗದಿಂದ ರಕ್ಷಿಸುವ ಉದ್ದೇಶವನ್ನು ಅಭಿಯಾನ ಹೊಂದಿದೆ. ಲಸಿಕೆ ನೀಡುವ ಮೂಲಕ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಪ್ರಯತ್ನ ಇದಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 11:30ಕ್ಕೆ ನಡೆಯಲಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.ಇದನ್ನು ಓದಿ –ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಮುಖ್ಯಮಂತ್ರಿಗಳು, ರಾಜ್ಯಪಾಲರು, ರಾಜ್ಯ ಆರೋಗ್ಯ ಸಚಿವರು ಹಾಗೂ ಹಿರಿಯ ಆರೋಗ್ಯಾಧಿಕಾರಿಗಳು ತಮ್ಮ ತಮ್ಮ ಕೇಂದ್ರ ಕಚೇರಿಗಳಿಂದ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದುವ ನಿರೀಕ್ಷೆಯಿದೆ.








