ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸುತ್ತಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ನಗರಾದ್ಯಂತ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಹನಗಳ ಹಾಗೂ ಪಾದಚಾರಿಗಳ ಓಡಾಟಕ್ಕೆ ತಾತ್ಕಾಲಿಕ ನಿರ್ಬಂಧ ಜಾರಿಗೊಳಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
Contents
- ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸುತ್ತಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ನಗರಾದ್ಯಂತ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ ವಿಧಿಸಲಾಗಿದೆ.
- ತಾತ್ಕಾಲಿಕ ಸಂಚಾರ ನಿರ್ಬಂಧ ಇರುವ ರಸ್ತೆಗಳು:
ತಾತ್ಕಾಲಿಕ ಸಂಚಾರ ನಿರ್ಬಂಧ ಇರುವ ರಸ್ತೆಗಳು:
- ಡಿಸಿ ಕಚೇರಿ ಜಂಕ್ಷನ್‌ನಿಂದ ಏಕಲವ್ಯ ವೃತ್ತದವರೆಗೆ
- ಮುಡಾ ಜಂಕ್ಷನ್‌ನಿಂದ ಡಾ. ಪದ್ಮ ವೃತ್ತದವರೆಗೆ
- ಪಡುವಾರಳ್ಳಿ ಜಂಕ್ಷನ್‌ನಿಂದ ಮೆಟ್ರೋಪೋಲ್ ವೃತ್ತದವರೆಗೆ
- ರೈಲ್ವೆ ನಿಲ್ದಾಣ ಜಂಕ್ಷನ್‌ನಿಂದ ಆರ್‌ಟಿಒ ವೃತ್ತದವರೆಗೆ
- ದಾಸಪ್ಪ ವೃತ್ತದಿಂದ ಹಸು-ಕರು ವೃತ್ತದವರೆಗೆ
- ಆಕಾಶವಾಣಿ ವೃತ್ತದಿಂದ ಮಾಲ್ಗುಡಿ ಜಂಕ್ಷನ್‌ವರೆಗೆ
ಈ ಮಾರ್ಗಗಳಲ್ಲಿ ವಾಹನಗಳ ಸಂಚಾರ ಮಾತ್ರವಲ್ಲದೆ, ಪಾದಚಾರಿಗಳ ಓಡಾಟಕ್ಕೂ ತಾತ್ಕಾಲಿಕ ನಿರ್ಬಂಧ ಇರಲಿದೆ.
ಈ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.








