ಚನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಚಿತ್ರ ನಟ ವಿಜಯ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದೆ.
40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿವೆ ಎಂದು ವರದಿಯಾಗಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಂತೆ ಕೇಳಿಕೊಂಡರು.








