ಮೈಸೂರು: ಮುಡಾ ಪ್ರಕರಣದಲ್ಲಿ ರುವಾರಿಯಾಗಿ ಗುರುತಿಸಲ್ಪಟ್ಟ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಸ್ನೇಹಮಯಿ ಕೃಷ್ಣ, ನಟೇಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಣ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಇದನ್ನು ಓದಿ –ಶಿವಾಜಿ ಜಯಂತಿ ಗಲಾಟೆ: 8 ಮಂದಿ ಬಂಧನ
ಈ ಕುರಿತು ನಟೇಶ್ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಸೈಬರ್ ಪೊಲೀಸರು ಇಂದು ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದಾರೆ.








