ಬೆಂಗಳೂರು: ಮುಡಾ ಹಗರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಪವಿತ್ರ ಎಂಬ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೊ. ಮೈಲಾರಪ್ಪ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹೇರಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಹಿಳೆಯ ದೂರಿನ ಮೇರೆಗೆ ಸ್ನೇಹಿಮಯಿ ಕೃಷ್ಣ ಅವರನ್ನು ಎ1 ಆರೋಪಿಯಾಗಿ ದಾಖಲಿಸಿಕೊಂಡು ಬಸವೇಶ್ವರ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.








