ಮೈಸೂರು: ಕುಟುಂಬ ಕಲಹದಿಂದ ಬೇಸತ್ತ ಪೊಲೀಸ್ ಪೇದೆ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೀರೇಶ್ (37) ಎಂದು ಗುರುತಿಸಲಾಗಿದೆ. ಅವರು ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ನಿವಾಸಿಯಾಗಿದ್ದು, ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆದಲ್ಲಿ ಪೊಲೀಸ್ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಬೀರೇಶ್ ತಮ್ಮ ಪತ್ನಿ ಮತ್ತು ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಾಗಿದ್ದರು.
ತೀವ್ರ ಮನಸ್ತಾಪಕ್ಕೆ ಒಳಪಟ್ಟ ಬೀರೇಶ್ ತಮ್ಮ ಮನೆಯಲ್ಲಿ ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆ ತಿಳಿದು ಬಂದ ತಕ್ಷಣ ನಂಜನಗೂಡು ತಾಲೂಕಿನ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ ಹಾಗೂ ಪಿಎಸ್‌ಐ ಕೃಷ್ಣಕಾಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ –ಆಪರೇಷನ್ ಮಹಾದೇವ್ – ಪಹಲ್ಗಾಮ್ ದಾಳಿಯ ಮೂವರು ಉಗ್ರರ ಎನ್‌ಕೌಂಟರ್
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ.