ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಈ ವರ್ಷದ ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಹಾಗೂ ಹಲವು ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.

ಬೆಟ್ಟ ಏರಿದ ಬಳಿಕ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದು ದೇವಾಲಯ ಪ್ರವೇಶಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ, ಮಂಗಳಾರತಿ ಸ್ವೀಕರಿಸಿದ್ದಾರೆ.ಇದನ್ನು ಓದಿ –ಕಾರು–ಬೈಕು ಬೆಲೆಯಲ್ಲಿ ಭಾರೀ ಇಳಿಕೆ – ಇಲ್ಲಿದೆ ಸಂಪೂರ್ಣ ಪಟ್ಟಿ

ಈ ಸಂದರ್ಭದಲ್ಲಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯ ಫಲತಾಂಬೂಲ ನೀಡಿ, ಶಾಲು ಹೊದಿಸಿ ಗೌರವ ಸಲ್ಲಿಸಿದರು.








