ಮೈಸೂರು : ಮೈಸೂರು ದಸರಾ ಸಂಭ್ರಮಕ್ಕೆ ಗೊಂಬೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆಯಾದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ವಸ್ತು ಪ್ರದರ್ಶನ ಮೈದಾನದ ಮುಂಭಾಗದಲ್ಲಿ ಸುಮಾರು 10 ರಿಂದ 13 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆಕೆ ದಸರಾ ಸಂದರ್ಭದಲ್ಲಿ ಬಲೂನ್ ಹಾಗೂ ಗೊಂಬೆ ಮಾರಾಟ ಮಾಡುತ್ತಿದ್ದಾಳೆ ಎಂದು ಅಂದಾಜಿಸಲಾಗಿದೆ.ಇದನ್ನು ಓದಿ –ಮಧ್ಯರಾತ್ರಿ DCM ಆದೇಶದ ನಂತರ ಬಿಗ್ ಬಾಸ್ ಮನೆ ತೆರೆ
ಈ ಘಟನೆ ಮೈಸೂರಿನ ನಜರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.








