- : ಇಬ್ಬರು ಮಹಿಳೆಯರು ಸೇರಿ 6 ಜನ ಬಂಧನ
ಮೈಸೂರು, ಜುಲೈ 07: ಮೈಸೂರಿನಲ್ಲಿ ಹೈಟೆಕ್ ರೀತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದನೆ ಮಾಡಿ, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮೈಸೂರು ಜಿಲ್ಲಾ ಪೊಲೀಸರು, ಸಂಬಂಧಿಸಿದ ಮನೆಯ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಯುವತಿಯರು ಹಾಗೂ ಆರು ಪುರುಷರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ದಂಧೆಯ ಪ್ರಮುಖ ಆರೋಪಿ ಮಂಜು ಎಂಬಾತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊರಡಿಸಲಾಗಿದೆ.ಇದನ್ನು ಓದಿ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಆರೋಪಿ ಮತ್ತು ಇತರರು ಪ್ರತಿ 30 ದಿನಗಳಿಗೊಮ್ಮೆ ಮನೆ ಬದಲಾಯಿಸುತ್ತಾ ಬೇರೆ ಬೇರೆ ಪ್ರದೇಶಗಳಿಂದ ಮಹಿಳೆಯರನ್ನು ಕರೆಸಿ, ಹಣದ ಆಮಿಷವಿಟ್ಟು ವೇಶ್ಯಾವಾಟಿಕೆಗೆ ತೊಡಗಿಸುತ್ತಿದ್ದರು ಎಂದು ತನಿಖೆ ಮೂಲಕ ಬೆಳಕಿಗೆ ಬಂದಿದೆ.