ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಿರ್ಮಿಸಲಾದ ‘ರಾಜೀವ್ ಗಾಂಧಿ ಡ್ರ್ಯಾಗನ್ ಕೊಳ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಅಧಿಕೃತವಾಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲೆಯ ಮೇಲಿರುವ ವಿಶೇಷ ಕಾಳಜಿಯಿಂದಾಗಿ ಜಿಲ್ಲೆಯನ್ನು ವಿಭಿನ್ನವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅವರ ದಿಟ್ಟ ನಿರ್ಧಾರಗಳು ಮತ್ತು ಸ್ಪಷ್ಟ ನಾಯಕತ್ವದಿಂದ ರಾಜ್ಯಕ್ಕೆ ಉತ್ತಮ ಆಡಳಿತ ದೊರೆಯುತ್ತಿದೆ ಎಂದು ಹೇಳಿದರು.
ಉದ್ಘಾಟನಾ ಸಮಾರಂಭದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಗಳನ್ನು ಪ್ರತಿಬಿಂಬಿಸುವ ವಿಶೇಷ ಲೇಸರ್ ಶೋ ಪ್ರದರ್ಶನವೂ ನಡೆಯಿತು.ಇದನ್ನು ಓದಿ –ಮೈಸೂರು ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ
ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ., ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹಾಗೂ ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.








