By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ದೂರು ಬಿಡಿ, ದಾರಿ ಹುಡುಕಿ”
    April 28, 2026
    ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    April 26, 2026
    ” ಸರಳತೆಯೇ ಸೌರಭ “
    April 26, 2026
    ಮತ್ತೇ ಬರಲಿ ಆ ಕಾಲ
    April 26, 2026
    “ಅಕ್ಷರಗಳ ಮೇಲಿನ‌ ಅತ್ಯಾಚಾರ”
    April 25, 2026
  • Sports
  • National
  • International
  • Crime
Reading: ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ
BengaluruKarnatakaTrending

ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ

Team Varthaman
Last updated: April 28, 2026 7:22 PM
Team Varthaman
Published: April 28, 2026
Share
SHARE
  • ₹2,016 ಕೋಟಿ ಐತಿಹಾಸಿಕ ವಹಿವಾಟು  


ಬೆಂಗಳೂರು: 110 ವರ್ಷಗಳ ಇತಿಹಾಸವಿರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಮೈಸೂರು ಸ್ಯಾಂಡಲ್) 2025-26ನೇ ವರ್ಷದಲ್ಲಿ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿ 507 ಕೋಟಿ ರೂ. ಲಾಭ ಗಳಿಸಿದೆ.


ಮೈಸೂರು ಸ್ಯಾಂಡಲ್ ಸಂಸ್ಥೆಯ ಪಾಲಿಗೆ ಇದು ಚಾರಿತ್ರಿಕ ಮೈಲುಗಲ್ಲು. ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು
ಸಂಸ್ಥೆಯ ಅಪೂರ್ವ ಸಾಧನೆಯ ಹಿನ್ನೆಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮೈಸೂರು ಸ್ಯಾಂಡೆಲ್ ಸಾಧನೆಯ ಶಿಖರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂಸ್ಥೆಯು ಮೊದಲ ಒಂದು ಸಾವಿರ ಕೋಟಿ ರೂ.ಗಳ ವಹಿವಾಟನ್ನು ತಲುಪಲು 105 ವರ್ಷ ತೆಗೆದುಕೊಂಡಿತ್ತು.

Join WhatsApp Group

ಆದರೆ, ಅಲ್ಲಿಂದ 2 ಸಾವಿರ ಕೋಟಿ ರೂ. ವಹಿವಾಟನ್ನು ಕೇವಲ ನಾಲ್ಕು ವರ್ಷಗಳಲ್ಲಿ ತಲುಪಿದೆ. ಅದರಲ್ಲೂ 2022-23 ರಲ್ಲಿ 1,375 ಕೋಟಿ ರೂ. ವಹಿವಾಟು ನಡೆಸಿದ್ದ ಸಂಸ್ಥೆಯು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ಮೂರು ವರ್ಷಗಳಲ್ಲಿ 2,016 ಕೋಟಿ ರೂ. ತಲುಪಿದೆ. ಇಷ್ಟು ಅಲ್ಪಾವಧಿಯಲ್ಲಿ ಕೆ.ಎಸ್.ಡಿ.ಎಲ್ ವಹಿವಾಟು 641 ಕೋಟಿ ರೂ.ಗಳನ್ನು ಹೆಚ್ಚಳ ಕಂಡಿದೆ ಎಂದು ಶ್ಲಾಘಿಸಿದರು.


ಮೊದಲು ಸಂಸ್ಥೆಯು ಕೇವಲ 34 ಉತ್ಪನ್ನಗಳನ್ನು ಹೊಂದಿತ್ತು. ಮೂರು ವರ್ಷಗಳಲ್ಲಿ ನಾವು 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದೇವೆ. ಈಗ ಒಟ್ಟು 94 ಉತ್ಪನ್ನಗಳಿವೆ. ಯಾವುದೇ ಹೊಸ ನೇಮಕಾತಿ ಇಲ್ಲದೆ, ಯಂತ್ರೋಪಕರಣಗಳ ಖರೀದಿ ಇಲ್ಲದೆ ಇದನ್ನೆಲ್ಲ ಸಾಧಿಸಲಾಗಿದೆ. ಬಂದಿರುವ 507 ಕೋಟಿ ರೂ. ಲಾಭದಲ್ಲಿ ಸರಕಾರಕ್ಕೆ 157 ಕೋಟಿ ರೂ. ಲಾಭಾಂಶ (ಡಿವಿಡೆಂಡ್) ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂ. ಹಸ್ತಾಂತರಿಸಲಾಗುವುದು. ಹೋದ ವರ್ಷ 135 ಕೋಟಿ ರೂ. ಕೊಡಲಾಗಿತ್ತು. ಇದರಲ್ಲಿ ಈಗ 22 ಕೋಟಿ ರೂ. ಹೆಚ್ಚಳವಾಗಿದೆ ಎಂದು ಅವರು ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಸಿ ಎಸ್ ಅಪ್ಪಾಜಿ ನಾಡಗೌಡ ಮಾತನಾಡಿ, ಆಸ್ಟ್ರೇಲಿಯಾ ಸೇರಿದಂತೆ ದೇಶ ವಿದೇಶಗಳಿಗೆ ಹೋಗಿ ಸಾಬೂನು ಮಾರಾಟ ವಿಸ್ತರಣೆಗೆ ಪ್ರಯತ್ನ ಮಾಡಿದ್ದೇವೆ. ಆಧುನಿಕ ಮಾರಾಟ ವ್ಯವಸ್ಥೆ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದು ಇವತ್ತಿನ ಸಾಧನೆಗೆ ಕಾರಣವಾಯಿತು ಎಂದು ಹೇಳಿದರು.


ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿಕೆಎಂ ಪ್ರಶಾಂತ್ ಮಾತಮಾಡಿ, ಸಂಸ್ಥೆಯ ನೌಕರರಿಗೆ 4.83 ಕೋಟಿ ರೂಪಾಯಿಯನ್ನು ವೇತನ ಒಪ್ಪಂದದ ಮೂಲಕ ನೀಡಲಾಗಿದೆ. 20 ಕೋಟಿ ರೂಪಾಯಿ ಕ್ಯಾಂಪಸ್ ಸಂರಕ್ಷಣೆ ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.

₹5 ಸಾವಿರ ಕೋಟಿಗೆ ವಿಸ್ತರಣೆ ಗುರಿ

ಸಂಸ್ಥೆಯ ವಹಿವಾಟನ್ನು 2028ರ ಹೊತ್ತಿಗೆ 3 ಸಾವಿರ ಕೋಟಿ ರೂ. ಮತ್ತು 2030ರ ಹೊತ್ತಿಗೆ 5 ಸಾವಿರ ಕೋಟಿ ರೂ.ಗಳಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ವಿಜಯಪುರದಲ್ಲಿ 50 ಎಕರೆಯಲ್ಲಿ ನೂತನ ಉತ್ಪಾದನಾ ಘಟಕ ಆರಂಭವಾಗಲಿದೆ. ಇದಕ್ಕೆ 229 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಕಳೆದ ಮೂರು ವರ್ಷಗಳಲ್ಲಿ ಸಂಸ್ಥೆಯು ರೈತರಿಂದಲೇ ನೇರವಾಗಿ 174 ಟನ್ ಗಂಧ ಖರೀದಿಸಿದೆ. 6.08 ಕೋಟಿ ರೂ.ಗಳನ್ನು ನೇರ ಪಾವತಿ ಮಾಡಿದೆ. ಬೆಂಗಳೂರು, ಡಾಬಸಪೇಟೆ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಖಾಲಿ ಜಾಗ ಹೊಂದಿದೆ. ಇವುಗಳ ಸದ್ಬಳಕೆಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಇದು ಸಾಧ್ಯವಾದರೆ ಸಂಸ್ಥೆಯ ಪಾಲಿಗೆ ಆರ್ಥಿಕ ಹರಿವಿನ ಶಾಶ್ವತ ಸಂಪನ್ಮೂಲವೊAದು ಸೃಷ್ಟಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.ಇದನ್ನು ಓದಿ –IPL ಬ್ಲಾಕ್ ಟಿಕೆಟ್ ದಂಧೆ: 24 ಮಂದಿ ಬಂಧನ

ಸಂಸ್ಥೆಯ ಹೆಮ್ಮೆಯ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆಯೇ ಮೂಲವಸ್ತುವಾಗಿದೆ. ಇದರ ಸುಗಮ ಪೂರೈಕೆಗೆ ಸಂಸ್ಥೆಯು ರೈತರೊಂದಿಗೆ ಕೈಜೋಡಿಸಿದ ಗ್ರೋ ಮೋರ್ ಸ್ಯಾಂಡಲ್ ಕಾರ್ಯಕ್ರಮ ರೂಪಿಸಿದೆ. ಇದರಡಿಯಲ್ಲಿ 10 ವರ್ಷಗಳಲ್ಲಿ 10 ಸಾವಿರ ಎಕರೆ ಗಂಧದ ನೆಡುತೋಪು ಬೆಳೆಸಲಾಗುವುದು. ಇದಕ್ಕಾಗಿ ರೈತರಿಗೆ ಪ್ರತಿ ಗಂಧದ ಗಿಡಕ್ಕೆ 3 ವರ್ಷಗಳಿಗೆ 500 ರೂ. ಪ್ರೋತ್ಸಾಹಧನ ನೀಡಲಾಗುವುದು. ಜತೆಗೆ ಬೆಂಗಳೂರಿನ ಜಿಕೆವಿಕೆ ಮತ್ತು ವಿಜಯಪುರದ ಕೃಷಿ ವಿದ್ಯಾಲಯಗಳ ಸಹಯೋಗದಲ್ಲಿ ಶ್ರೀಗಂಧದ ಅಧ್ಯಯನ ಪೀಠ ತೆರೆಯಲಾಗುವುದು ಎಂದು ಪಾಟೀಲ್ ತಿಳಿಸಿದ್ದಾರೆ.

  • 8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
    by Team Varthaman
    April 28, 2026
  • ಅನ್ನ-ನೀರಿಗೆ ಹಾಹಾಕಾರ, ಅಪಮೃತ್ಯು ಹೆಚ್ಚಳ: ಕೋಡಿಮಠ ಶ್ರೀಗಳ ಭವಿಷ್ಯವಾಣಿ
    by Team Varthaman
    April 28, 2026
  • ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ
    by Team Varthaman
    April 28, 2026
  • IPL ಬ್ಲಾಕ್ ಟಿಕೆಟ್ ದಂಧೆ: 24 ಮಂದಿ ಬಂಧನ
    by Team Varthaman
    April 28, 2026
  • ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ
    by Team Varthaman
    April 28, 2026


ಸ್ಥಳೀಯರ ಸಲಹೆಯೊಂದಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
ಪೋಕ್ಸೊ ಕೇಸ್‌ನಲ್ಲಿ ಲಂಚ: ಪೊಲೀಸರು ಲೋಕಾಯುಕ್ತ ಬಲೆಗೆ
ಬಿ ಖಾತೆದಾರರಿಗೆ ಎ ಖಾತೆ ಭಾಗ್ಯ — ರಾಜ್ಯ ಸರ್ಕಾರದಿಂದ 6ನೇ ಗ್ಯಾರಂಟಿ ಜಾರಿಗೆ
₹1 ಲಕ್ಷ ಲಂಚ ಸ್ವೀಕರಿಸಿದ PI ಮತ್ತು PSI ಲೋಕಾಯುಕ್ತ ಬಲೆಗೆ
TAGGED:latestnewsMysore Sandalsಮೈಸೂರು ಸ್ಯಾಂಡಲ್‌
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakashivmoggaTrending

ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ

Team Varthaman
Team Varthaman
January 8, 2026
SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ
ಘಾನಾದಿಂದ ಪ್ರಧಾನಿ ಮೋದಿಗೆ ರಾಷ್ಟ್ರೀಯ ಗೌರವ
ಎಷ್ಟು ಕಷ್ಟವೋ….ಹೊಂದಿಕೆಯೆಂಬುದು ನಾಲ್ಕುದಿನದ ಈ‌ ಬಾಳಿನಲಿ…..!!
ರಾಮ ನಾಮ ಜಪದ ಮಹಿಮೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?