- ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ
ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಉಂಟುಮಾಡಿದ್ದು, ಇದೀಗ ಅರಣ್ಯ ಇಲಾಖೆ ಈ ಸಂಬಂಧ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.
ಈ ದುಃಖದ ಘಟನೆಯು ನಿನ್ನೆ ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಸ್ಥಳೀಯ ರೈತರು ತಮ್ಮ ಜಮೀನಿಗೆ ತೆರಳಿದಾಗ ನವಿಲುಗಳ ಮೃತದೇಹಗಳನ್ನು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ಮೃತ ನವಿಲುಗಳಲ್ಲಿ 14 ಹೆಣ್ಣು ನವಿಲುಗಳು ಸೇರಿವೆ.
ನವಿಲುಗಳ ನಿಖರ ಮರಣಕಾರಣ ಸ್ಪಷ್ಟವಾಗಿಲ್ಲದಿದ್ದರೂ, ಕೆಲವೊಂದು ಬೆಳೆಗಳ ಮೇಲೆ ಕ್ರಿಮಿನಾಶಕವನ್ನು ಸಿಂಪಡಿಸಿದ್ದರಿಂದ ಅವುಗಳನ್ನು ನವಿಲುಗಳು ಸೇವಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನು ಆಧರಿಸಿ ಅರಣ್ಯ ಇಲಾಖೆ ಅಪರಾಧದ ಕೋನದಿಂದ ತನಿಖೆ ಪ್ರಾರಂಭಿಸಿದೆ.ಇದನ್ನು ಓದಿ –ಇಂದು ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಘಟನಾಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್ ಪರೀಕ್ಷೆಗೆ ಕಳುಹಿಸಿದ್ದು, ಪೋಷಕಾಂಶ ವಿಶ್ಲೇಷಣೆ ಮೂಲಕ ನಿಖರ ಸತ್ಯ ಹೊರಬೀಳುವ ನಿರೀಕ್ಷೆ ವ್ಯಕ್ತವಾಗಿದೆ.