ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಅಕ್ಟೋಬರ್ 11ರಂದು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಅಕ್ಟೋಬರ್ 21ರಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಆಚರಣೆಯ ದಿನಾಂಕ ಹಾಗೂ ಕಾರ್ಯಕ್ರಮಗಳ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ನಿರ್ಧಾರದಂತೆ, ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ.
ಅಕ್ಟೋಬರ್ 21ರಂದು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಅಂದು ಸಂಜೆ 4.10ರಿಂದ 4.35ರ ನಡುವೆ ಮುಖ್ಯಮಂತ್ರಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.ಇದನ್ನು ಓದಿ –ಚೆನ್ನೈನಲ್ಲಿ ಮೊದಲ ಬಾರಿಗೆ ಬಿಗ್ ಬ್ಯಾಷ್ ಲೀಗ್ ಉದ್ಘಾಟನಾ ಪಂದ್ಯ
ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.








