ನವದೆಹಲಿ: ಕೇಂದ್ರ ಸರ್ಕಾರ ಇದೇ ಏಪ್ರಿಲ್ 1ರ ಒಳಗೆ ಹೊಸ ಟೋಲ್ ಸುಂಕ ನೀತಿಯನ್ನು ಪ್ರಕಟಿಸಲು ಯೋಜನೆ ರೂಪಿಸಿದ್ದು, ಇದರಿಂದ ವಾಹನ ಸವಾರರಿಗೆ ಸವಲತ್ತು ದೊರೆಯಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಹೊಸದಾಗಿ ತರುವ ಈ ನೀತಿಯಡಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಟೋಲ್ ದರದಲ್ಲಿ ನಿರ್ದಿಷ್ಟ ಪ್ರಮಾಣದ ರಿಯಾಯಿತಿ ಲಭ್ಯವಾಗಲಿದೆ. ಇದರಿಂದ ಪ್ರಯಾಣಿಕರ ಮೇಲೆ ಹಣಕಾಸಿನ ಹೊರೆ ಕಡಿಮೆಯಾಗುವ ನಿರೀಕ್ಷೆಯಿದೆ. ಜೊತೆಗೆ, ಟೋಲ್ ವಸೂಲಿಯ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
2023-24ನೇ ಆರ್ಥಿಕ ವರ್ಷದ ವೇಳೆಯಲ್ಲಿ ಒಟ್ಟು 64,809.86 ಕೋಟಿ ರೂಪಾಯಿ ಟೋಲ್ ಸಂಗ್ರಹವಾಗಿದ್ದು, ಇದು ಹಿಂದಿನ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಾಗಿದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.