- ಹೃದಯಾಘಾತಕ್ಕೆ ನವವಿವಾಹಿತ ಬಲಿ ಮದುವೆಯಾಗಿ ಮೂರು ತಿಂಗಳಲ್ಲೇ ದುರ್ಘಟನೆ
ನೆಲಮಂಗಲ: ಹೃದಯಾಘಾತದಿಂದ ನವವಿವಾಹಿತ ಯುವಕ ಸಾವನ್ನಪ್ಪಿದ ದುಃಖಕರ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಅರೆಕೆತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಯುವಕನನ್ನು ಚರಣ್ (30) ಎಂದು ಗುರುತಿಸಲಾಗಿದೆ. ಚರಣ್ ಅವರಿಗೆ ಮೂರು ತಿಂಗಳ ಹಿಂದೆ ಮದುವೆಯಾಗಿತ್ತು. ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅವರು ಮನೆಯಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಕುಟುಂಬದವರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ ವೈದ್ಯರು ಪರೀಕ್ಷಿಸಿದಾಗಲೇ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ಇದನ್ನು ಓದಿ –ಹಾಸನ ಪಾಲಿಕೆ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
ನಂತರ ಚರಣ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಗಾರಕ್ಕೆ ರವಾನೆ ಮಾಡಲಾಗಿದೆ. ಚರಣ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದಿಂದ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.








