- ವೇದವಿದ್ಯಾ ವಿಹಾರ ಗುರುಕುಲಕ್ಕೆ ಶಂಕುಸ್ಥಾಪನೆ
ರಾಮನಗರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಲಿರುವ ಅವರು, ನೂತನವಾಗಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಮರಳಿ ತೆರಳಲಿದ್ದಾರೆ.
ಕಾರ್ಯಕ್ರಮಕ್ಕೆ ಆಹ್ವಾನಿತರಿಗಷ್ಟೇ ಪ್ರವೇಶವಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.








