ಪಾಟ್ನಾ: ನಿತೀಶ್ ಕುಮಾರ್ ಅವರು ದಾಖಲೆಯ 10ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಎನ್‌ಡಿಎ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು.
ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಸೇರಿದಂತೆ ಒಟ್ಟು 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಈ ಅವಧಿಯಲ್ಲಿಯೂ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.








