ನವದೆಹಲಿ: ಎಲ್‌ಪಿಜಿ ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಆಗಿದೆ ಎಂಬ ವರದಿಗಳು ತಪ್ಪು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ತಿಳಿಸಿದೆ.
ಈ ಕುರಿತು ಇಂಡಿಯನ್ ಆಯಿಲ್ ಸಂಸ್ಥೆ ಮಾಹಿತಿ ನೀಡಿದ್ದು, ದೇಶಾದ್ಯಂತ ಎಲ್‌ಪಿಜಿ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಾಕಷ್ಟು ಸ್ಟಾಕ್ ಲಭ್ಯವಿದೆ ಎಂದು ತಿಳಿಸಿದೆ.
ಪಿಎಂ ಉಜ್ವಲ ಯೋಜನೆಯಡಿ 45 ದಿನ, ನಗರ ಪ್ರದೇಶಗಳಿಗೆ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಿಗೆ 45 ದಿನಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಇದನ್ನು ಓದಿ –ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ
ಅಧಿಕೃತ ಮಾಹಿತಿಗಳನ್ನೇ ನಂಬಬೇಕು, ಅನಗತ್ಯ ಗಾಬರಿಯಿಂದ ಗ್ಯಾಸ್ ಬುಕ್ಕಿಂಗ್ ಮಾಡುವ ಅಗತ್ಯವಿಲ್ಲ ಎಂದು ಜನರಿಗೆ ಮನವಿ ಮಾಡಲಾಗಿದೆ.








