ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರ ಕಡಿತ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಆದರೆ ಅದರ ಬಗ್ಗೆ ಪ್ರಶ್ನಿಸದೆ ರಾಜ್ಯ ಸರ್ಕಾರ ತೆರಿಗೆ ಕಡಿತ ಮಾಡಬೇಕೆಂದು ಕೇಳುವುದು ಸರಿಯಲ್ಲ ಎಂದು ಹೇಳಿದರು.
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಕಡಿಮೆ ಇತ್ತು. ಈಗ ಕೇಂದ್ರ ಸರ್ಕಾರದ ಅವಧಿಯಲ್ಲಿ ಎಲ್ಲದರ ಬೆಲೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು.ಇದನ್ನು ಓದಿ –ಡಾಲರ್ ಎದುರು ರೂಪಾಯಿ ಮೌಲ್ಯ ಚೇತರಿಕೆ
ರಾಜ್ಯ ಸರ್ಕಾರ ಜನರಿಗೆ ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದಾಗ ಪ್ರಶ್ನೆ ಕೇಳದವರು ರಾಜ್ಯ ಸರ್ಕಾರದ ಮೇಲೆ ಮಾತ್ರ ಒತ್ತಡ ಹಾಕುತ್ತಿದ್ದಾರೆ ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.








