- ಶೋಧ ಕಾರ್ಯಾಚರಣೆ ಮುಂದುವರಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ‘ಆಪರೇಷನ್ ಅರಹಮಾ’ ಕಾರ್ಯಾಚರಣೆ ಮುಂದುವರಿದಿದ್ದು, ಈ ವೇಳೆ ಭಾರತೀಯ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು, ಅಡಗಿ ಕುಳಿತಿದ್ದ ಉಗ್ರನನ್ನು ಗುರುತಿಸಿ ಹತ್ಯೆ ಮಾಡಲು ಯಶಸ್ವಿಯಾಗಿದೆ. ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಸೇನಾಪಡೆಗಳು ತೀವ್ರ ಪ್ರತಿದಾಳಿ ನಡೆಸಿ ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.
ಪ್ರದೇಶದಲ್ಲಿ ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ
ಈ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಹಾಗೂ ಭಾರತೀಯ ಸೇನೆಯ ಅಸ್ಸಾಂ ರೆಜಿಮೆಂಟ್ ಪಡೆಗಳು ಜಂಟಿಯಾಗಿ ಭಾಗವಹಿಸುತ್ತಿವೆ.








