By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಎಂಕೆ ಹಾಸ್ಟೆಲ್‌ ಗೆ ವಕ್ಫ್‌ ಮಂಡಳಿ ನೋಟಿಸ್‌ಗೆ ಆಕ್ರೋಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಎಂಕೆ ಹಾಸ್ಟೆಲ್‌ ಗೆ ವಕ್ಫ್‌ ಮಂಡಳಿ ನೋಟಿಸ್‌ಗೆ ಆಕ್ರೋಶ
KarnatakaMysoreTrending

ಎಂಕೆ ಹಾಸ್ಟೆಲ್‌ ಗೆ ವಕ್ಫ್‌ ಮಂಡಳಿ ನೋಟಿಸ್‌ಗೆ ಆಕ್ರೋಶ

Team Varthaman
Last updated: April 25, 2025 12:45 PM
Team Varthaman
Published: April 25, 2025
Share
SHARE

ಮೈಸೂರು: ಮೈಸೂರಿನ ವಿನೋಬ ರಸ್ತೆಯಲ್ಲಿರುವ ಎಂಕೆ ಹಾಸ್ಟೆಲ್‌ಗೆ ವಕ್ಫ್ ಮಂಡಳಿ ನೋಟಿಸ್ ನೀಡಿರುವುದನ್ನು ಖಂಡಿಸಿ, ವಿನೋಬ ರಸ್ತೆಯ ವರ್ತಕರು, ಕನ್ನಡ ಪರ ಸಂಘಟನೆ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ಹಾಸ್ಟೆಲ್ ಮುಂಭಾಗ ಜಮಾಯಿಸಿದ ನೂರಾರು ಮಂದಿ ವಕ್ಫ್‌ ಮಂಡಳಿ ನಿರ್ಧಾರಕ್ಕೆ ಮೌನವಾಗಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ, ವಕ್ಫ ಬೋರ್ಡ್ ರದ್ದುಗೊಳಿಸಿ, ಅನಧಿಕೃತ ನೋಟಿಸ್ ತೆರವುಗೊಳಿಸಿ, ಸನಾತನ ಹಿಂದೂ ಧರ್ಮಕ್ಕೆ ಜೈ, ನಮ್ಮದೂ ನಮ್ಮದೂ ಎಂಕೆ ಹಾಸ್ಟಲ್ ನಮ್ಮದ್ದು ಎಂದು ಘೋಷಣೆ ಕೂಗಿದರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಸ್ಟೆಲ್ ಗೋಡೆ ಮೇಲೆ ಅಂಟಿಸಿದ್ದ ನೋಟಿಸ್ ಮೇಲೆ ಬರೆಯುವ ಮೂಲಕ ಅದನ್ನು ವಿರೋಧಿಸಿದರು.  

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ೧೦೯ ವರ್ಷಗಳ ಇತಿಹಾಸ ವಿರುವ ಎಂಕೆ ಹಾಸ್ಟೆಲ್ ಗೋಡೆ ಮೇಲೆ ಏಕಾಏಕಿ ವಕ್ಫ್ ಮಂಡಳಿ ನೋಟಿಸ್ ಅಂಟಿಸಿ, ನಮಗೆ ಸೇರಿದ್ದು ಎಂದು ಹೇಳುತ್ತಿದ್ದಾರೆ. ಮೈಸೂರಿನಲ್ಲಿ ಮಹಾರಾಜರ ಹಿನ್ನೆಲೆ ಇದೆಯೇ ಹೊರತು ಹೈದರಾಲಿ, ಟಿಪ್ಪು ಸುಲ್ತಾನ್ ಅವರ ಇತಿಹಾಸವಿಲ್ಲ ಎಂದರು.
೨೦೧೩ರ ವಕ್ಫ್ ಕಾಯ್ದೆ ತಿದ್ದುಪಡಿಯಲ್ಲಿ ಖಾಸಗಿ ಜಮೀನು, ಸರ್ಕಾರಿ ಜಮೀನು ಅಥವಾ ಯಾರದ್ದೇ ಜಮೀನು ಆದರೂ ಕಬಳಿಸಲು ಅವಕಾಶ ನೀಡಲಾಗಿತ್ತು. ಅಂದಿನ  ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ತಿದ್ದುಪಡಿ ಮಾಡಲಾಗಿತ್ತು. ಅದಕ್ಕೇ ಈಗ ಪ್ರಧಾನಿ ಮೋದಿ ಹೊಸ ವಕ್ಫ್ ತಿದ್ದುಪಡಿ ಕಾನೂನು ತಂದಿದ್ದಾರೆ. ಖಾಸಗಿ ಆಸ್ತಿಯನ್ನು ಕಬಳಿಸಲು ವಕ್ಫ್ ಮಂಡಳಿ ಮುಂದಾಗಿದೆ, ಇದಕ್ಕೆ ಖಂಡಿತ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಿದರು.

Join WhatsApp Group

ದೇವರಾಜು ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂದು ಹೇಳಿದ್ದರು. ಅದು ಈಗ ಏಕೆ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿ, ವಕ್ಫ್ ನವರು ಹಾಸ್ಟೆಲ್ ಮಾಲೀಕ ಮನ್ನಾರ್ ಕೃಷ್ಣಶೆಟ್ಟಿ ಅವರಿಗೆ ಹುಟ್ಟಿದ್ದಾರಾ ಅಥವಾ ಅವರ ಕುಟುಂಬಕ್ಕೆ ಸೇರಿದ್ದಾರಾ? ಎಂದು ಅವರು ಕೇಳಿದರು. ಸಿದ್ದರಾಮಯ್ಯ ಅವರು ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದ್ದಾರೆ, ಇದಕ್ಕೆಲ್ಲ ನಾವು ಅವಕಾಶ ಮಾಡಿ ಕೊಡುವುದಿಲ್ಲ, ಇದನ್ನು ಇಲ್ಲೇ ಹರಿದು ಬಿಸಾಕುತ್ತೇವೆ ಎಂದರು.

ಎಂಕೆ ಹಾಸ್ಟೆಲ್ ಮಾಲೀಕರಾದ ಸಿ.ವಿ. ರಾಮಚಂದ್ರ ಶೆಟ್ಟಿ ಮಾತನಾಡಿ, “ನಮ್ಮ ಜಾಗದ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಅವರ ಬಳಿ ಏನು ದಾಖಲೆಗಳಿವೆಯೋ ಅದನ್ನು ತೋರಿಸಲಿ, ನಾವು ಕೋರ್ಟ್ ಮೂಲಕ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇತ್ತೀಚೆಗೆ ವಕ್ಫ್ ಮಂಡಳಿ ಸಾರ್ವಜನಿಕ ಸ್ಥಳಗಳನ್ನು ಮತ್ತು ಖಾಸಗಿ ಆಸ್ತಿಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಜಾಗವನ್ನು ವಕ್ಫ್ ಮಂಡಳಿಗೆ ಬಿಟ್ಟುಕೊಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. “ಅದು ನಮ್ಮ ಆಸ್ತಿ ಅಂತ ಒಂದೇ ಒಂದು ದಾಖಲೆ ಇದ್ದರೇ ತೋರಿಸಲಿ. ನಾವು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು.ಇದನ್ನು ಓದಿ –ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ನಗರಪಾಲಿಕೆ ಸದಸ್ಯರಾದ ಪ್ರಶಾಂತ್‌ಗೌಡ,, ಪ್ರಮೀಳ ಭರತ್, ಕನ್ನಡಪರ ಹೋರಾಟಗಾರರಾದ ಮೈಕಾ ಪ್ರೇಮ್ ಕುಮಾರ್, ತೇಜಸ್ ಲೋಕೇಶ್ ಗೌಡ, ಎಸ್.ಕೆ.ದಿನೇಶ್,  ಹೋಟಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಾರಾಯಣಗೌಡ, ನವೀನ್ ಹೆಬ್ಬಾಳ್, ನೇಹ ಮತ್ತಿತರರು ಪಾಲ್ಗೊಂಡಿದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ
MUDA ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ
ನಿಯಮ ಉಲ್ಲಂಘಿಸಿದ 89 ಪಿಜಿಗಳಿಗೆ ದಂಡ; 19 ಮೆಸ್‌ಗಳಿಗೆ ಬೀಗ
ಶಾಲೆಗೆ ಮನೋವೈದ್ಯ ಮನೆಗೆ ಅಜ್ಜಿ-ತಾತ ಬೇಕು
100 ದಿನಗಳ ವಿಶ್ರಾಂತಿಯ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಪ್ರವೇಶ
TAGGED:breakingnewsKarnataka GovtlatestnewsMysore NewsWaqf Boardವಕ್ಫ್‌ ಮಂಡಳಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChikkamagaluruCrime

ವರದಕ್ಷಿಣೆ ಕಿರುಕುಳ: ಪತಿಯ ಹಿಂಸೆ ತಾಳಲಾರದೆ ಮಹಿಳೆ ಬಲಿ

Team Varthaman
Team Varthaman
March 28, 2025
ಪ್ರತಿ ಪಿಎಚ್‌ಸಿಗಳಲ್ಲೂ ಕ್ಯಾನ್ಸರ್‌ ಅರಿವು ಘಟಕ ಸ್ಥಾಪಿಸಲಿ:ಡಾ.ವೈ.ಎಸ್‌.ಮಾಧವಿ
ಲಕ್ಷ ಕಂಠಗಳ ಹನುಮಾನ್ ಚಾಲೀಸಾ
ಪತ್ನಿಯಿಂದ ರಾಜ್ಯದ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ?
ಶರಣ ಲೋಕದ ಧ್ರುವತಾರೆ…ಸಮಗಾರ ಹರಳಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?