ಬೆಂಗಳೂರು: ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಇನ್ನು ಮುಂದೆ ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆ–2026’ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಪಾಲಿಕೆಗಳಲ್ಲಿ ಅನುಸರಿಸುತ್ತಿರುವ ಮಾದರಿಯಂತೆ, ಪಂಚಾಯತ್ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕಲ್ಪಿಸುವುದೇ ಈ ತಿದ್ದುಪಡಿಯ ಉದ್ದೇಶವಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿ, ಬಳಿಕ ಮಸೂದೆಗೆ ಹಸಿರು ನಿಶಾನೆ ತೋರಿಸಲಾಗಿದೆ.
ಬಹುತೇಕ ಗ್ರಾಮ ಪಂಚಾಯತ್‌ಗಳ ಅವಧಿ ಫೆಬ್ರವರಿ–ಮಾರ್ಚ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ, ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಇದಲ್ಲದೆ, 2026ರ ಏಪ್ರಿಲ್–ಮೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ನಡೆಸುವ ಉದ್ದೇಶದಿಂದ ಸರ್ಕಾರ ಪೂರ್ವಸಿದ್ಧತೆ ಆರಂಭಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಇದನ್ನು ಓದಿ –RCB ಮಹಿಳಾ ತಂಡಕ್ಕೆ ಎರಡನೆ ಕಿರೀಟ








