ರಾಮನಗರ : ತಾಂಡಾ, ಹಟ್ಟಿ, ಹಾಡಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಾಗುತ್ತಿರುವವರಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಪರಿಹಾರ ಸಿಕ್ಕಿದೆ. ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಪಟ್ಟಾ ಖಾತೆ ವಿತರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಭಾನುವಾರ ರಾಮನಗರದಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ‘ಯುವ ಪರ್ವ’ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ರಾಜ್ಯದ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಸಮಾವೇಶವು ಬೃಹತ್ ಮಟ್ಟದಲ್ಲಿ ನಡೆಯಲಿದ್ದು, ಇದಕ್ಕಾಗಿ ಪಕ್ಷದ ನಾಯಕರೊಂದಿಗೆ ಸಮ್ಮೇಳನದ ತಯಾರಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ದೇಶದ ಯುದ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.ಇದನ್ನು ಓದಿ –ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಈ ಕ್ರಮದಿಂದ ಕಂದಾಯ ಭೂಮಿಯಲ್ಲಿ ವಾಸವಿರುವ ಸಾವಿರಾರು ಕುಟುಂಬಗಳಿಗೆ ಖಾಯಂ ಆಸ್ತಿ ದಾಖಲಾತಿ ಲಭಿಸಿ, ಅವರು ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತದೆ.