ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು 90 ಪೈಸೆಯಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.
ಮೇ 15ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಲಾ 3 ರೂಪಾಯಿ ಹೆಚ್ಚಿಸಿತ್ತು. ಇದೀಗ ಮತ್ತೊಮ್ಮೆ ದರ ಏರಿಕೆ ಮಾಡಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 98.64 ರೂಪಾಯಿ ಮತ್ತು ಡೀಸೆಲ್ ದರ 91.58 ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ 107.12 ರೂಪಾಯಿಗೆ ಹಾಗೂ ಡೀಸೆಲ್ ದರ 95.04 ರೂಪಾಯಿಗೆ ತಲುಪಿದೆ.ಇದನ್ನು ಓದಿ –ಕಾಂಗ್ರೆಸ್ ನಿರ್ನಾಮಕ್ಕೆ ತುಮಕೂರು ಸಮಾವೇಶ: ಎಚ್‌ಡಿಕೆ
ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿಯೂ ಇಂಧನ ದರದಲ್ಲಿ ಏರಿಕೆ ದಾಖಲಾಗಿದೆ. ನಿರಂತರ ದರ ಏರಿಕೆಯಿಂದ ಸಾರ್ವಜನಿಕರ ಮೇಲಿನ ಆರ್ಥಿಕ ಭಾರ ಮತ್ತಷ್ಟು ಹೆಚ್ಚಾಗಿದೆ.








