ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಹೆಚ್ಚಿಸಲಾಗಿದ್ದು, ವಾಹನ ಸವಾರರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಕಳೆದ 10 ದಿನಗಳಲ್ಲಿ ಮೂರನೇ ಬಾರಿ ಇಂಧನ ದರ ಏರಿಕೆ ಮಾಡಲಾಗಿದೆ.
ಶನಿವಾರ ಪೆಟ್ರೋಲ್ ದರ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ದರ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ.ಗೆ ತಲುಪಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ 99.51 ರೂ. ಮತ್ತು ಡೀಸೆಲ್ ದರ 92.49 ರೂ. ಆಗಿದೆ. ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿಯೂ ಇಂಧನ ದರ ಏರಿಕೆಯಾಗಿದೆ.
ಮಧ್ಯಪ್ರಾಚ್ಯದ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆ ಸರ್ಕಾರಿ ತೈಲ ಕಂಪನಿಗಳು ಮೇ 15ರಿಂದ ಹಂತ ಹಂತವಾಗಿ ದರ ಹೆಚ್ಚಿಸುತ್ತಿವೆ.ಇದನ್ನು ಓದಿ –ಬಲಮುರಿಯಲ್ಲಿ ಇಬ್ಬರು ಯುವಕರ ಜಲಸಮಾಧಿ
ಮೇ 15ರಂದು ಲೀಟರ್‌ಗೆ 3 ರೂ. ಏರಿಕೆ ಮಾಡಲಾಗಿತ್ತು. ಬಳಿಕ ಮೇ 19ರಂದು 90 ಪೈಸೆ ಹೆಚ್ಚಳವಾಗಿದ್ದು, ಇದೀಗ ಮತ್ತೊಮ್ಮೆ ದರ ಏರಿಕೆಯಾಗಿದೆ. ಒಟ್ಟಾರೆ 10 ದಿನಗಳಲ್ಲಿ ಇಂಧನ ದರ ಸುಮಾರು 5 ರೂ.ಗಳಷ್ಟು ಏರಿಕೆಯಾಗಿದೆ.








