ಹಾಸನ: ಫೋಟೋಶೂಟ್ ಮಾಡುವ ಸಂದರ್ಭ ಕಾಲು ಜಾರಿ ನೀರಿನಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿರುವ ದುಃಖದ ಘಟನೆ ಹಾಸನ ತಾಲ್ಲೂಕಿನ ಹಾಲುವಾಗಿಲು ಗ್ರಾಮದಲ್ಲಿ ನಡೆದಿದೆ.
ನಾಗೇಂದ್ರ (19) ಮೃತಪಟ್ಟ ಯುವಕನಾಗಿದ್ದು, ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಕೆಲಸ ಮುಗಿಸಿದ ಬಳಿಕ, ಸ್ನೇಹಿತ ಮಂಜುನಾಥ್ ಜೊತೆ ಹಾಲುವಾಗಿಲು ಬಳಿ ಹರಿಯುವ ನೀರನ್ನು ನೋಡಲು ತೆರಳಿದನು.
ಈ ವೇಳೆ, ನಾಗೇಂದ್ರ ಹರಿಯುವ ನೀರಿನಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವಾಗ ಅವನ ಕಾಲು ಜಾರಿ ಕಟ್ಟೆಗೆ ಬಿದ್ದು ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣವೇ ಮಂಜುನಾಥ್ ಆತನನ್ನು ರಕ್ಷಿಸಲು ಮುಂದಾದರೂ ಪ್ರಯೋಜನವಾಗಿಲ್ಲ. ಅದೃಷ್ಟವಶಾತ್ ಮಂಜುನಾಥ್ ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ರಾತ್ರಿ ಸಮಯವಾದುದರಿಂದ ಶೋಧ ಕಾರ್ಯ ಮುಂದೂಡಲಾಯಿತು. ಇಂದು ಬೆಳಗ್ಗೆಯಿಂದ ನಾಗೇಂದ್ರನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಹಾಗೂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
- ಕನ್ನಡಿಗರ ವಿರುದ್ಧ ವಿವಾದಿತ ಹೇಳಿಕೆ: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
- ಯೂನಿಯನ್ ಬ್ಯಾಂಕ್‌ನಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ
- ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ