By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
BengaluruCrimeKarnatakaTrending

ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ

Team Varthaman
Last updated: June 25, 2026 6:56 PM
Team Varthaman
Published: June 25, 2026
Share
SHARE
  • ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಅಧೀನ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನಿನ ಆದೇಶದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಜಾಮೀನು ರದ್ದುಪಡಿಸುವಂತೆ ಆದೇಶ ನೀಡಿದೆ.

Join WhatsApp Group

ಆದಾಗ್ಯೂ, ಸ್ವಾಮೀಜಿಗೆ ಮೂರು ವಾರಗಳೊಳಗೆ ಸಂಬಂಧಿತ ಅಧೀನ ನ್ಯಾಯಾಲಯದಲ್ಲಿ ನಿಯಮಿತ (ರೆಗ್ಯುಲರ್) ಜಾಮೀನಿಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಬಂಧನದಿಂದ ರಕ್ಷಣೆ ಮುಂದುವರಿಯಲಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಸಂತ್ರಸ್ತೆಯ ಪರ ವಕೀಲರು, ದೂರು ದಾಖಲಾದ ಬಳಿಕ ಸ್ವಾಮೀಜಿಯಿಂದ ಬೆದರಿಕೆ ಹಾಕಲಾಗಿದೆ ಹಾಗೂ ಈ ಸಂಬಂಧ ಪ್ರತ್ಯೇಕ ಎಫ್‌ಐಆರ್ ಕೂಡ ದಾಖಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಜಾಮೀನು ಪಡೆಯುವವರೆಗೆ ಪ್ರಕರಣದ ಕುರಿತು ಯಾವುದೇ ರೀತಿಯ ಹೇಳಿಕೆ ನೀಡಬಾರದು. ಯಾಕೆ ಬೆದರಿಕೆ ಹಾಕಿದ್ದೀರಿ?” ಎಂದು ಸ್ವಾಮೀಜಿ ಪರ ವಕೀಲರಿಗೆ ತೀವ್ರ ಎಚ್ಚರಿಕೆ ನೀಡಿತು.

ಪ್ರಕರಣದ ವಿವರದ ಪ್ರಕಾರ, ಸಂತ್ರಸ್ತ ಬಾಲಕನ ತಾಯಿ 2026ರ ಮೇ 7ರಂದು ವಚನಾನಂದ ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದರು. ಮೇ 8ರಂದು ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಇದನ್ನು ಓದಿ -13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

ಆದರೆ, ದೂರು ದಾಖಲಾಗುವ ಮುನ್ನವೇ, ಅಂದರೆ ಮೇ 6ರಂದು ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಮುಂದಿನ ಕಾನೂನು ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ.

  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
  • ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಚಿತ: ಆರ್.ಅಶೋಕ
    by Team Varthaman
ಇಡಿ ದಾಳಿಗೂ ತಂದೆಗು ಸಂಬಂಧವಿಲ್ಲ: ನಲಪಾಡ್
ಮೈಸೂರಿನಲ್ಲಿ ವೈಯಕ್ತಿಕ ದ್ವೇಷದಿಂದ ಯುವಕನ ಬರ್ಬರ ಹತ್ಯೆ
KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ
ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
TAGGED:breakingnewslatestnewsVachanananda Sriಪೋಕ್ಸೊ ಪ್ರಕರಣವಚನಾನಂದ ಶ್ರೀ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruEducationKarnataka

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ

Team Varthaman
Team Varthaman
June 23, 2025
ಇಂದು ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ
ಅಪ್ಪು 4ನೇ ಪುಣ್ಯಸ್ಮರಣೆ
ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ: ಸಿದ್ದರಾಮಯ್ಯ
IPL ಟಿಕೆಟ್ ದಂಧೆ : KSCA ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?