ಮೈಸೂರು: ಎರಡು ದಿನಗಳ ಮೈಸೂರು ಪ್ರವಾಸ ಕೈಗೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಹೊರಟ ರಾಷ್ಟ್ರಪತಿ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು.

ಭದ್ರತಾ ಕಟ್ಟೆಚ್ಚರ:
ರಾಷ್ಟ್ರಪತಿ ಸಂಚರಿಸಿದ ಮಾರ್ಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನದ ನಂತರ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಯಿತು. ರಸ್ತೆ ಬದಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಜನರ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
ಮಳೆಯ ನಡುವೆಯೇ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ. ಸಮಾರಂಭ ಮುಗಿದ ನಂತರ ರಾಷ್ಟ್ರಪತಿ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ, ರಾತ್ರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.