- ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು: ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಮೇ 10ರಂದು ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಹೆಚ್‌ಎಎಲ್ ಗೇಟ್ ನಂ.30ರ ಮುಂಭಾಗ ಮುಂಜಾನೆ 5ರಿಂದ ಮಧ್ಯಾಹ್ನ 3ರವರೆಗೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕೆಲವು ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.
ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ ಇರುವ ಹೆಚ್‌ಎಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಎರಡೂ ಬದಿಗಳಲ್ಲೂ ಎಲ್ಲಾ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಅದೇ ರೀತಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರವರೆಗೆ ಇರುವ ರಸ್ತೆಯಲ್ಲಿಯೂ ವಾಹನ ಸಂಚಾರಕ್ಕೆ ತಡೆ ವಿಧಿಸಲಾಗಿದೆ.
ಇದಲ್ಲದೆ, ಹಳೆ ವಿಮಾನ ನಿಲ್ದಾಣ ರಸ್ತೆಯ ಎಸ್‌ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ, ಹೆಚ್‌ಎಎಲ್ ಗೇಟ್ ನಂ.30 ರಸ್ತೆ ಹಾಗೂ ಎಕ್ಸಿಟ್ ರಸ್ತೆಗಳಲ್ಲಿ ವಾಹನ ನಿಲುಗಡೆಗೂ ನಿರ್ಬಂಧ ವಿಧಿಸಲಾಗಿದೆ.
ವಾಹನ ಪಾರ್ಕಿಂಗ್‌ಗಾಗಿ ಹೆಚ್‌ಎಎಲ್ ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್‌ಡಿ ರಸ್ತೆ ಜಂಕ್ಷನ್), ಸರ್ ಎಸ್‌ಎಂವಿ ಕಾಲೇಜು ಮೈದಾನ ಹಾಗೂ ಹೆಚ್‌ಎಎಲ್ ಬಸ್ ಯಾರ್ಡ್ ಅನ್ನು ಸಾರ್ವಜನಿಕರಿಗೆ ಮೀಸಲಿರಿಸಲಾಗಿದೆ.
ಇನ್ನು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗ ಬಳಸುವವರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸೂಚಿಸಲಾಗಿದೆ.ಇದನ್ನು ಓದಿ –ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ
ತುಮಕೂರು ರಸ್ತೆಯಿಂದ ಕನಕಪುರ ರಸ್ತೆ ಕಡೆ ಸಾಗುವವರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ರಾಜ್‌ಕುಮಾರ್ ಪುಣ್ಯಭೂಮಿ ರಸ್ತೆಯ ಮೂಲಕ ತೆರಳಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.








