ಧಾರವಾಡ: ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಪೂರ್ವಾನುಮತಿ ಕಡ್ಡಾಯವೆಂಬ ಆದೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಕುರಿತಂತೆ ಹಿಂದೆ ಹೈಕೋರ್ಟ್‌ನ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಅದರ ವಿರುದ್ಧ ರಾಜ್ಯ ಸರ್ಕಾರದ ಪರವಾಗಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
ನವೆಂಬರ್ 4ರಂದು ನಡೆದ ವಿಚಾರಣೆಯಲ್ಲಿ ವಾದ–ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ ಇಂದು ತೀರ್ಪು ನೀಡಿದ್ದು, ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಸರ್ಕಾರದ ಮೇಲ್ಮನವಿ ವಜಾ ಮಾಡಿದೆ.
ಇದೇ ವೇಳೆ, ತಡೆ ತೆರವಿಗೆ ಸಂಬಂಧಿಸಿದಂತೆ ಸರ್ಕಾರವು ಮತ್ತೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಸೂಚನೆಯನ್ನು ಹೈಕೋರ್ಟ್ ನೀಡಿದೆ.ಇದನ್ನು ಓದಿ –ಕುಡಿದು ಬಂದ ಚಾಲಕರಿಂದ ಲಂಚ ಪಡೆದು ಡ್ಯೂಟಿ
ಈ ತೀರ್ಪಿನೊಂದಿಗೆ, ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಅನುಮತಿ ಕಡ್ಡಾಯ ಎನ್ನುವ ನಿಯಮ ಮುಂದುವರಿಯಲಿದೆ.








