ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮ ಎದುರಿಸಲು ಜನರು ಇಂಧನ ಬಳಕೆ ಕಡಿಮೆ ಮಾಡಬೇಕು. ಚಿನ್ನ ಖರೀದಿ ಹಾಗೂ ವಿದೇಶ ಪ್ರವಾಸವನ್ನು ಮುಂದೂಡಬೇಕು ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಅವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದಾರೆ. ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆAದು ಕಿಡಿಕಾರಿದ್ದಾರೆ. 12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ.
ಈಗ ಜನರಿಗೆ ಏನು ಖರೀದಿಸಬೇಕು. ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮೋದಿ ಜೀ ಜನರಿಗೆ ತ್ಯಾಗ ಮಾಡಲು ಕರೆ ನೀಡಿದ್ದಾರೆ. ಚಿನ್ನ ಖರೀದಿಸಬೇಡಿ, ವಿದೇಶಕ್ಕೆ ಹೋಗಬೇಡಿ, ಪೆಟ್ರೋಲ್ ಕಡಿಮೆ ಬಳಸಿ, ರಸಗೊಬ್ಬರ ಹಾಗೂ ಅಡುಗೆ ಎಣ್ಣೆ ಬಳಕೆಯನ್ನು ಇಳಿಸಿ, ಮೆಟ್ರೋ ಬಳಸಿರಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದಿದ್ದಾರೆ. ಇವು ಸಲಹೆಗಳ ಮಾತಲ್ಲ, ಸರ್ಕಾರದ ವೈಫಲ್ಯದ ಸಾಕ್ಷಿ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ –ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
ಅಮೆರಿಕಾ- ಇರಾನ್ ಯುದ್ಧ ಮೂರು ತಿಂಗಳು ಕಳೆದರೂ ದೇಶದ ಇಂಧನ ಭದ್ರತೆ ಕುರಿತು ಸರ್ಕಾರದ ಬಳಿ ಸ್ಪಷ್ಟ ಯೋಜನೆ ಇಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.








