ಯಾದಗಿರಿ: ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್ ಮತ್ತು ತಿಂಡಿ ಮಳಿಗೆಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಮಾರ್ಚ್ 12ರಂದು ನಗರದ ವಿವಿಧ ಪ್ರದೇಶಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 46 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೋಟೆಲ್‌ಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬದಲಿಗೆ ಕಡಿಮೆ ದರದ ಗೃಹಬಳಕೆಯ ಸಿಲಿಂಡರ್ ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಈ ದಾಳಿ ನಡೆಸಿದ್ದರು.
ಯಾದಗಿರಿ ನಗರದ ಪ್ರಮುಖ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ವೇಳೆ ಈ ಅಕ್ರಮ ಪತ್ತೆಯಾಗಿದೆ.
ನಿಯಮ ಉಲ್ಲಂಘಿಸಿ ಗೃಹಬಳಕೆಯ ಸಿಲಿಂಡರ್ ಬಳಸುವ ಹೋಟೆಲ್ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಇದನ್ನು ಓದಿ –ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು
ಗೃಹಬಳಕೆಯ ಸಿಲಿಂಡರ್‌ಗಳಿಗೆ ನೀಡಲಾಗುವ ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುವ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ರಾಜ್ಯಾದ್ಯಂತ ಇಲಾಖೆ ನಿಗಾ ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








