ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.ಇದನ್ನು ಓದಿ –1,850 ಗ್ರಾಂ ಚಿನ್ನಾಭರಣ ವಂಚನೆ
ಮಳೆ ಮತ್ತು ಬಿರುಗಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.








