- ದಕ್ಷಿಣ ಕರ್ನಾಟಕದಲ್ಲಿ ತುಸು ಬಿರುಗಾಳಿ ಸಹಿತ ಮಳೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ, ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಒಂದು ವಾರದವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸೋಮವಾರದಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ ಮೇ 5ರವರೆಗೆ ವರ್ಷಧಾರೆಯಾಗಲಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕೆಲವೆಡೆ ಪ್ರತಿಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಇದರಿಂದ ಬಾಳೆ, ಪಪ್ಪಾಯಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಮತ್ತು ಗುಡಿಸಲುಗಳಿಗೆ ಹಾನಿ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಡಿಲ ವಸ್ತುಗಳು ಹಾರುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೀದರ್‌ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು:
ರಾಜ್ಯದ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಬೀದರ್‌ನಲ್ಲಿ ಸೋಮವಾರ 43.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ತಾಪಮಾನ ಇಳಿಕೆಯಾಗುವ ನಿರೀಕ್ಷೆ ಇದೆ. ಬಳಿಕ 2-3 ಡಿಗ್ರಿ ಸೆಲ್ಸಿಯಸ್ ಮಟ್ಟಿಗೆ ತಾಪಮಾನ ನಿಧಾನವಾಗಿ ಹೆಚ್ಚಳವಾಗಬಹುದು.ಇದನ್ನು ಓದಿ –ಟರ್ಕಿ ಸೇನಾ ವಿಮಾನಗಳ ಪಾಕ್ ಪ್ರವೇಶ: ಪ್ರಾದೇಶಿಕ ಅಸ್ಥಿರತೆಯಲ್ಲಿ ತೀವ್ರತೆ
ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ವಾತಾವರಣದಲ್ಲಿ ದೊಡ್ಡ ಬದಲಾವಣೆ ಇರುವ ಸಾಧ್ಯತೆ ಕಡಿಮೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರುತ್ತದೆ.