By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಬೆಂಗಳೂರಿನಲ್ಲಿ ಮಳೆ ಅವಾಂತರ : ಗೋಡೆ ಕುಸಿದು 7 ಮಂದಿ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಬೆಂಗಳೂರಿನಲ್ಲಿ ಮಳೆ ಅವಾಂತರ : ಗೋಡೆ ಕುಸಿದು 7 ಮಂದಿ ಸಾವು
BengaluruKarnatakaLatest News

ಬೆಂಗಳೂರಿನಲ್ಲಿ ಮಳೆ ಅವಾಂತರ : ಗೋಡೆ ಕುಸಿದು 7 ಮಂದಿ ಸಾವು

Team Varthaman
Last updated: April 30, 2026 9:39 AM
Team Varthaman
Published: April 30, 2026
Share
SHARE

ಬೆಂಗಳೂರು: ದೀರ್ಘಕಾಲದ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ನಗರದ ಜನತೆಗೆ ನಿನ್ನೆ ಸಂಜೆ ಸುರಿದ ಮಳೆ ತಂಪು ನೀಡಿದರೂ, ಅದೇ ವೇಳೆ ಭೀಕರ ದುರಂತವನ್ನೂ ತಂದಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಗೋಡೆ ಕುಸಿತದಲ್ಲಿ ಇಬ್ಬರು ಮಕ್ಕಳನ್ನು ಒಳಗೊಂಡಂತೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ.

ನಿನ್ನೆ ಸಂಜೆ ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆಯ ಪಕ್ಕದಲ್ಲಿ ಆಶ್ರಯ ಪಡೆದಿದ್ದ ಹಾಗೂ ವ್ಯಾಪಾರ ಮಾಡುತ್ತಿದ್ದ ಜನರ ಮೇಲೆ ಅವಶೇಷಗಳು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

Join WhatsApp Group

ಈ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪ ಕೇಳಿಬರುತ್ತಿದೆ. ಕುಸಿದ ಗೋಡೆ ಸುಮಾರು 30 ವರ್ಷ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿ ಇತ್ತು. ಇದರ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿರಲಿಲ್ಲ ಎಂದು ತಿಳಿದುಬಂದಿದೆ.

ಆಸ್ಪತ್ರೆ ಪಕ್ಕದಲ್ಲಿ ನಡೆಯುತ್ತಿದ್ದ ಕಾಮಗಾರಿಗಾಗಿ ಮಣ್ಣು ಹಾಕಲಾಗಿದ್ದು, ಮಳೆಯಿಂದ ತೇವಾಂಶ ಹೆಚ್ಚಾಗಿ ಭಾರ ಹೆಚ್ಚಾದ ಕಾರಣ ಗೋಡೆ ಕುಸಿದಿರುವ ಸಾಧ್ಯತೆ ಇದೆ.

ಇದಲ್ಲದೆ, ಗೋಡೆ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಮೊದಲು ದೂರು ನೀಡಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದ ಸುರಕ್ಷತೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.ಇದನ್ನು ಓದಿ –ಶಾಸಕರ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ. ಖಾದರ್

ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಇಂತಹ ದೊಡ್ಡ ದುರಂತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ನಗರದ ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

  • NEET ಸೋರಿಕೆ ಭೀತಿ: ಟೆಲಿಗ್ರಾಮ್‌ಗೆ ತಾತ್ಕಾಲಿಕ ಬ್ರೇಕ್‌
    by Team Varthaman
    June 16, 2026
  • ಅರ್ಹರಿಗಷ್ಟೇ ಗ್ಯಾರಂಟಿ ಸೌಲಭ್ಯ, ಯೋಜನೆಗಳು ನಿಲ್ಲುವುದಿಲ್ಲ : ಸಿಎಂ
    by Team Varthaman
    June 16, 2026
  • ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ
    by Team Varthaman
    June 15, 2026
  • ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
    by Team Varthaman
    June 15, 2026
  • ಗೃಹಲಕ್ಷ್ಮಿ ಯೋಜನೆ:ಅನರ್ಹರ ವಿರುದ್ಧ ಕಟ್ಟುನಿಟ್ಟಿನ ಕ್ರಮ
    by Team Varthaman
    June 15, 2026
ಸುಪ್ರೀಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದ ವಕೀಲ : FIR ದಾಖಲು
ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ
ಕೆಂಪೇಗೌಡ ಜಯಂತಿ ಪ್ರಚಾರ ರಥಕ್ಕೆ ಅದ್ಧೂರಿ ಚಾಲನೆ  
ಮುಡಾ ಪ್ರಕರಣ: ಕೋರ್ಟ್‌ಗೆ ಕೇಸ್ ಡೈರಿ ಸಲ್ಲಿಕೆ
ನಾಳೆ ಪ್ರಕಟವಾಗಲಿದೆ 2025ರ SSLC ಪರೀಕ್ಷೆಯ ಫಲಿತಾಂಶ
TAGGED:breakingnewslatestnewsRain in Bangloreseven death
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಇಸ್ರೇಲ್ ಆಕ್ರಮಣ ನಿಲ್ಲಿಸಿದರೆ ಮಾತ್ರ ದಾಳಿ ನಿಲ್ಲಿಸುತ್ತೇವೆ: ಇರಾನ್‌ ಸ್ಪಷ್ಟನೆ

Team Varthaman
Team Varthaman
June 24, 2025
ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ
ಸಿಎಂ ಸಿದ್ದರಾಮಯ್ಯ ನ.20-21 ಮೈಸೂರು ಪ್ರವಾಸ
ಸಾರಿಗೆ ನೌಕರರು ಮುಷ್ಕರ ಕೈಬಿಡಲಿ; ಸರ್ಕಾರದ ಪರಿಸ್ಥಿತಿ ಅರಿತು ಸಹಕರಿಸಿ – ಡಿ.ಕೆ. ಶಿ
ಪ್ರಜಾವಾಣಿಯ ಕುಸುಮಾ ಶಾನುಭಾಗ್ ಇನ್ನಿಲ್ಲ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?