ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ನಡುವೆಯೇ, ವಾಯುಭಾರ ಕುಸಿತದ ಪರಿಣಾಮವಾಗಿ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಇದನ್ನು ಓದಿ –ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
ಇನ್ನೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.








