ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ಬೆಂಗಳೂರಿನಲ್ಲಿ ಮಳೆಯಾದ ಪರಿಣಾಮ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮುಂದಿನ ಕೆಲವು ದಿನಗಳಲ್ಲಿಯೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದ್ದು, ಏಪ್ರಿಲ್ 10ರಿಂದ 12ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ವೇಳೆಗೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ತಾಪಮಾನದಲ್ಲಿ ಏರಿಕೆ ಕಾಣಲಿದೆ.ಇದನ್ನು ಓದಿ –ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಆಯ್ಕೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು ನಗರದಲ್ಲಿ ಹಗಲು ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35°C ಮತ್ತು ಕನಿಷ್ಠ ಉಷ್ಣಾಂಶ 23°C ಇರಲಿದ್ದು, ಗಾಳಿಯ ವೇಗ ಗಂಟೆಗೆ 6–13 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








