ಬೆಂಗಳೂರು: ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಹಾಸನ, ಉಡುಪಿ ಸೇರಿದಂತೆ ಒಟ್ಟು 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏಪ್ರಿಲ್ 21ರಂದು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ರಾಜ್ಯದಲ್ಲಿ ಬಿಸಿಲಿನ ತಾಪಮಾನವೂ ಹೆಚ್ಚಾಗಿದ್ದು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸೋಮವಾರ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ 41.6 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41.4 ಡಿಗ್ರಿ, ಕೊಪ್ಪಳದಲ್ಲಿ 40.4 ಡಿಗ್ರಿ ಹಾಗೂ ವಿಜಯಪುರದಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಇದನ್ನು ಓದಿ –ಜಾತಿವ್ಯವಸ್ಥೆ ಇರುವವರೆಗೆ ಬಸವ ತತ್ವಗಳು ಪ್ರಸ್ತುತ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರದಲ್ಲಿ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಬಿಸಿಲಿನ ನಡುವೆಯೇ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








