ಬೆಂಗಳೂರು: ಕೆಲವು ದಿನಗಳ ಬಿಡುವಿನ ನಂತರ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವಾರು ಜಿಲ್ಲೆಗಳಿಗೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದೇ ವೇಳೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ನಾಗರಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಬೆಂಗಳೂರು, ಮಂಡ್ಯ, ರಾಮನಗರ ಹಾಗೂ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನು ಓದಿ –4ನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ಸಿಂಹವಾಹಿನಿ ಅಲಂಕಾರ
ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ, ಜಿಲ್ಲಾ ಆಡಳಿತಗಳು ತುರ್ತು ಸೇವೆಗಳು ಸಜ್ಜಾಗಿರಲು ಸೂಚನೆ ನೀಡಿವೆ. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.