- ಸಂಪುಟದಲ್ಲೇ ಮುಂದುವರಿಕೆ
ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಪ್ಪು ಗ್ರಹಿಕೆಯಿಂದ ಈ ಬೆಳವಣಿಗೆ ನಡೆದಿದ್ದು, ರಾಮಲಿಂಗಾರೆಡ್ಡಿ ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಣ್ಣ ಅಸಮಾಧಾನವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸಿದೆ ಎಂದು ಆರೋಪಿಸಿದರು.
ಹಿರಿಯ ನಾಯಕರ ಮನವೊಲಿಕೆ ಯಶಸ್ವಿ
ರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷದ ಅಮೂಲ್ಯ ಆಸ್ತಿ ಎಂದು ಬಣ್ಣಿಸಿದ ಸುರ್ಜೇವಾಲ, ಸಮಸ್ಯೆ ಪರಿಹರಿಸಲು ಪಕ್ಷದ ಹಿರಿಯ ನಾಯಕತ್ವ ಒಟ್ಟಾಗಿ ಪ್ರಯತ್ನಿಸಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ತಾವು ರಾಮಲಿಂಗಾರೆಡ್ಡಿ ಅವರೊಂದಿಗೆ ನಿರಂತರ ಮಾತುಕತೆ ನಡೆಸಿದ್ದಾಗಿ ತಿಳಿಸಿದರು.ಇದನ್ನು ಓದಿ –ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಸೌಹಾರ್ದಯುತವಾಗಿ ಬಗೆಹರಿಸಲಾಗಿದ್ದು, ರಾಮಲಿಂಗಾರೆಡ್ಡಿ ಸರ್ಕಾರ ಮತ್ತು ಪಕ್ಷದೊಂದಿಗೆ ಮುಂದುವರಿಯಲಿದ್ದಾರೆ ಎಂದು ಸುರ್ಜೇವಾಲ ಹೇಳಿದರು.








