ಬೆಂಗಳೂರು : ರಾಮನಗರ ಜಿಲ್ಲೆಯ ಹೆಸರನ್ನು ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಈ ಕುರಿತು ಡೆಪ್ಯೂಟಿ ಸಿಎಂ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ, “ರಾಮನಗರದ ಜಿಲ್ಲಾಧಿಕಾರಿ ಕಚೇರಿ ಮತ್ತು ಇತರ ಆಡಳಿತಾತ್ಮಕ ವ್ಯವಸ್ಥೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
ಜಿಲ್ಲಾಧಿಕಾರಿ ಕಚೇರಿ ರಾಮನಗರದಲ್ಲೇ ಮುಂದುವರಿಯುತ್ತದೆ. ಮೂಲತಃ ಇದು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದು, ಈಗಿನಿಂದ ಇದನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಕರೆಯಲಾಗುತ್ತದೆ” ಎಂದು ತಿಳಿಸಿದ್ದಾರೆ.ಇದನ್ನು ಓದಿ –ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ
ಇದಕ್ಕೂ ಮುನ್ನ, ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ನಡೆದ ಪ್ರಯತ್ನಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ವಿರೋಧಿಸಿದ್ದರು. ಆದರೆ ಇದೀಗ ಈ ಬದಲಾವಣೆಗೆ ಸಚಿವ ಸಂಪುಟ ಆಮೋದ ನೀಡಿದ್ದು, ಅಧಿಕೃತವಾಗಿ ಹೊಸ ಹೆಸರನ್ನು ಜಾರಿಗೆ ತರಲಾಗುತ್ತಿದೆ.