ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
‘ಗೀತಾ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೆಡ್’ ಸಿನಿಮಾಗಳಲ್ಲಿ ಆನ್-ಸ್ಕ್ರೀನ್ ಜೋಡಿಯಾಗಿ ಮೆಚ್ಚುಗೆ ಪಡೆದಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಒಂದಾಗಿದೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಇಂದು ಬೆಳಿಗ್ಗೆ ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ಪರಂಪರಾಗತತೆಲುಗು ವಿಧಿವಿಧಾನಗಳಂತೆ ಮದುವೆ ನೆರವೇರಿದಂತೆ ತಿಳಿದುಬಂದಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸರಳ ಆದರೆ ಸೊಬಗಿನ ಸಮಾರಂಭ ನಡೆದಿದೆ .
ಸಂಜೆ ವೇಳೆ ಕೊಡವ ಸಂಪ್ರದಾಯದಂತೆ ಮತ್ತೊಂದು ವಿಶೇಷ ಸಮಾರಂಭ ಆಯೋಜಿಸಲಾಗಿದ್ದು, ಎರಡೂ ಕುಟುಂಬಗಳ ಸಂಸ್ಕೃತಿ ಸಂಪ್ರದಾಯಗಳಿಗೆ ಗೌರವ ಸೂಚಿಸುವ ರೀತಿಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.








