By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: RCB ಸತತ ಎರಡನೇ ಬಾರಿ IPL ಚಾಂಪಿಯನ್ಸ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Main News > RCB ಸತತ ಎರಡನೇ ಬಾರಿ IPL ಚಾಂಪಿಯನ್ಸ್
Main News

RCB ಸತತ ಎರಡನೇ ಬಾರಿ IPL ಚಾಂಪಿಯನ್ಸ್

Team Varthaman
Last updated: May 31, 2026 11:41 PM
Team Varthaman
Published: May 31, 2026
Share
SHARE

ಅಹಮದಾಬಾದ್: ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕ ಹಾಗೂ ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐತಿಹಾಸಿಕ ಸಾಧನೆ ಮಾಡಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ಆರ್‌ಸಿಬಿ ಬೌಲರ್‌ಗಳ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ವಾಷಿಂಗ್ಟನ್ ಸುಂದರ್ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಜೋಸ್ ಬಟ್ಲರ್ 19, ನಿಶಾಂತ್ ಸಿಂಧು 20 ರನ್ ಗಳಿಸಿದರು.

Join WhatsApp Group

ಆರ್‌ಸಿಬಿ ಪರ ರಸಿಖ್ ಸಲಾಮ್ 3 ವಿಕೆಟ್ ಕಬಳಿಸಿದರೆ, ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಜಲ್‌ವುಡ್ ತಲಾ 2 ವಿಕೆಟ್ ಪಡೆದರು.

156 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ಒದಗಿಸಿದರು. ಅಯ್ಯರ್ 32 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅಜೇಯ 75 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ರಜತ್ ಪಾಟೀದಾರ್ 15, ಟಿಮ್ ಡೇವಿಡ್ 24 ರನ್‌ಗಳ ಕೊಡುಗೆ ನೀಡಿದರು. ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ 12 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದ ಕೆಲವೇ ತಂಡಗಳ ಸಾಲಿಗೆ ಆರ್‌ಸಿಬಿ ಸೇರ್ಪಡೆಯಾಗಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.

  • ಹೆಲಿಕ್ಯಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆ ಮದುಮಗ ಸಾವು
    by Team Varthaman
  • ಮೇ ತಿಂಗಳಲ್ಲಿ ₹1.94 ಲಕ್ಷ ಕೋಟಿ GST ಸಂಗ್ರಹ; ಶೇ. 3.2ರಷ್ಟು ಏರಿಕೆ
    by Team Varthaman
  • Bitcoin ಪ್ರಕರಣ: ಮೊಹಮ್ಮದ್ ನಲಪಾಡ್‌ಗೆ ಇಡಿ ಸಮನ್ಸ್
    by Team Varthaman
  • ರಾಜ್ಯದಲ್ಲಿ ಮಳೆಯ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
  • ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ
    by Team Varthaman
ಮಂಡ್ಯ KSRTC ಬಸ್ ಡಿಕ್ಕಿ – ಇಬ್ಬರು ಬೈಕ್ ಸವಾರರ ದುರ್ಮರಣ
ವಾಣಿಜ್ಯ LPG ಸಿಲಿಂಡರ್ ದರದಲ್ಲಿ 51 ರೂ. ಇಳಿಕೆ
ಡ್ರಗ್ಸ್ ಜಾಲ ಬಯಲು; ಐವರು ವಿದ್ಯಾರ್ಥಿಗಳ ಬಂಧನ
ಜನರ ಜೀವಕ್ಕಿಂತ VIP ಟಿಕೆಟ್‌ಗಳೇ ಮುಖ್ಯವೇ? ನಿಖಿಲ್ ಆಕ್ರೋಶ
ಹಿಂಗಾರು ಚುರುಕು – KRS ಡ್ಯಾಂನಿಂದ ನೀರು ಬಿಡುವ ಸಾಧ್ಯತೆ
TAGGED:breakingnewsIPL 2026latestnewsRCBRoyal Challengers BangloreVirat
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaWeather

ರಾಜ್ಯದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Team Varthaman
Team Varthaman
October 6, 2025
ಜೈಲಿನಲ್ಲಿ ದರ್ಶನ್‌ಗೆ ಸೌಲಭ್ಯ ವಿಚಾರ: ಸರ್ಕಾರಕ್ಕೆ ಸುಪ್ರೀಂ ವರದಿ ಸೂಚನೆ
ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ
ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
ನಿತೀಶ್ ಕುಮಾರ್ ಐತಿಹಾಸಿಕ 10ನೇ ಅವಧಿ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?