ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಎದುರುನೋಡುವ ಅಭ್ಯರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರದಲ್ಲೇ 15,000 ಪೊಲೀಸ್ ಕಾನ್ಸ್‌ಟೇಬಲ್ ಹಾಗೂ 402 ಪಿಎಸ್‌ಐ ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮಾತನಾಡಿದ ಅವರು, “ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಸಜ್ಜಾಗಿದೆ. 10,000ರಿಂದ 15,000 ಕಾನ್ಸ್‌ಟೇಬಲ್ ಹುದ್ದೆಗಳನ್ನು ಶೀಘ್ರದಲ್ಲಿ ನೇಮಕ ಮಾಡಲಾಗುತ್ತದೆ,” ಎಂದು ಹೇಳಿದರು.
ಅದೇ ರೀತಿ, ಈಗಾಗಲೇ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ ನೀಡಲಿರುವುದಾಗಿ ತಿಳಿಸಿದರು.
ಇದನ್ನು ಓದಿ –ಕಾವೇರಿ ನದಿಗೆ ಹಾರಿದ MCA ಪದವೀಧರೆ – ಹುಡುಕಾಟ ಮುಂದುವರಿಕೆ
ಮಂಗಳೂರಿನ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಲು ಜನರಿಂದ ಆಗಿರುವ ಬೇಡಿಕೆಗೆ ಸಂಬಂಧಿಸಿದಂತೆ, ಸರ್ಕಾರ ಈ ಬಗ್ಗೆ ಸಾಧ್ಯತೆಗಳ ಮತ್ತು ಅಡಚಣೆಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದರು.